alex Certify ರೈತರಿಗೆ ಸಿಹಿ ಸುದ್ದಿ: ಮೊದಲ ಬಾರಿಗೆ ಮೆಕ್ಕೆಜೋಳಕ್ಕೆ ಬಂಪರ್ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಸಿಹಿ ಸುದ್ದಿ: ಮೊದಲ ಬಾರಿಗೆ ಮೆಕ್ಕೆಜೋಳಕ್ಕೆ ಬಂಪರ್ ಬೆಲೆ

ಮೊದಲ ಬಾರಿಗೆ ಮೆಕ್ಕೆಜೋಳಕ್ಕೆ ಬಂಪರ್ ಬೆಲೆ ಬಂದಿದ್ದು, ರೈತರಲ್ಲಿ ಸಂತಸ ತಂದಿದೆ. ಕೋಳಿಯ ಆಹಾರ ಸೇರಿ ಕೆಲವು ಉದ್ಯಮಗಳಿಗೆ ಮಾತ್ರ ಸೀಮಿತವಾಗಿದ್ದ ಮೆಕ್ಕೆಜೋಳದಿಂದ ಈಗ ಎಥೆನಾಲ್ ಉತ್ಪಾದನೆ ಮಾಡಲಾಗುತ್ತಿದ್ದು, ಇದರ ಪರಿಣಾಮ ಮೆಕ್ಕೆಜೋಳಕ್ಕೆ ಭಾರಿ ಬೇಡಿಕೆ ಬಂದಿದೆ.

ಕೊಪ್ಪಳ ಮಾರುಕಟ್ಟೆಯಲ್ಲಿ ಒಂದು ಕ್ವಿಂಟಲ್ ಮೆಕ್ಕೆಜೋಳ 2950 ರೂ.ವರೆಗೂ ಮಾರಾಟವಾಗಿದ್ದು, ಈ ಹಿಂದಿನ ಎಲ್ಲಾ ದಾಖಲೆಗಳನ್ನು ಹಿಂದಿಕ್ಕಿದೆ. ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡುವಂತೆ ರೈತರು ಒತ್ತಾಯಿಸುತ್ತಿದ್ದರು. ಪ್ರಸ್ತುತ ಕೇಂದ್ರ ಸರ್ಕಾರ 2330 ರೂ. ಬೆಂಬಲ ಬೆಲೆ ಘೋಷಿಸಿದ್ದು, ಇದಕ್ಕಿಂತಲೂ ಮಾರುಕಟ್ಟೆಯಲ್ಲಿ ದರ ಹೆಚ್ಚಳವಾಗಿದೆ.

ಸಾಮಾನ್ಯವಾಗಿ ಮೆಕ್ಕೆಜೋಳ ದರ ಎರಡು ಸಾವಿರ ರೂಪಾಯಿ ಆಸುಪಾಸಿನಲ್ಲಿರುತ್ತಿತ್ತು. ರಾಜ್ಯದ 10 ಸಕ್ಕರೆ ಕಾರ್ಖಾನೆಗಳಿಗೆ ಎಥೆನಾಲ್ ಉತ್ಪಾದನೆಗೆ ಅನುಮತಿ ನೀಡಿದ್ದು, ಪ್ರತಿದಿನ 70 ಸಾವಿರ ಕ್ವಿಂಟಲ್ ಮೆಕ್ಕೆಜೋಳ ಬೇಕಾಗಬಹುದು ಎಂದು ಹೇಳಲಾಗಿದೆ.

ಮೆಕ್ಕೆಜೋಳಕ್ಕೆ ಬೇಡಿಕೆ ಬಂದಿರುವುದರಿಂದ ಹಿಂದಿಗಿಂತಲೂ ಉತ್ತಮ ದರ ಬಂದಿದೆ. ಬೇರೆ ಉದ್ಯಮಗಳಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಬೆಲೆ ನಿಯಂತ್ರಣ ಮಾಡಲಾಗಿದೆ. 2700 ರಿಂದ 2950 ರೂ.ಗೆ ಮೆಕ್ಕೆಜೋಳ ಮಾರಾಟವಾಗುತ್ತಿದೆ. ಕೋಳಿ ಸಾಕಾಣಿಕೆಗೆ ಮೆಕ್ಕೆಜೋಳವೇ ಪ್ರಮುಖ ಆಹಾರವಾಗಿದ್ದು, ದರ ಏರಿಕೆಯಿಂದ ಮೊಟ್ಟೆ, ಕೋಳಿ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...