alex Certify BREAKING : ಬಿಜೆಪಿ ಶಾಸಕ ‘ಮುನಿರತ್ನ’ ಜಾಮೀನು ಅರ್ಜಿ ವಿಚಾರಣೆ : ನಾಳೆಗೆ ಆದೇಶ ಕಾಯ್ದಿರಿಸಿದ ಕೋರ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಿಜೆಪಿ ಶಾಸಕ ‘ಮುನಿರತ್ನ’ ಜಾಮೀನು ಅರ್ಜಿ ವಿಚಾರಣೆ : ನಾಳೆಗೆ ಆದೇಶ ಕಾಯ್ದಿರಿಸಿದ ಕೋರ್ಟ್.!

ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ನಡೆಸಿದಂತ ಕೋರ್ಟ್  ನಾಳೆಗೆ ಆದೇಶ ಕಾಯ್ದಿರಿಸಿದೆ.

ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ನಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದಂತಹ ಕೋರ್ಟ್  ನಾಳೆಗೆ ಆದೇಶ ಕಾಯ್ದಿರಿಸಿದೆ.

ಮುನಿರತ್ನ ವಿರುದ್ಧ 8 ಕೇಸ್ ಗಳು ಬಾಕಿ ಇದೆ . ಆರೋಪಿಯ ಇತಿಹಾಸವನ್ನು ಕೋರ್ಟ್ ಪರಿಗಣಿಸಬೇಕು. ಮಹಿಳೆಯ ಗೌರವಕ್ಕೆ ಧಕ್ಕೆಯಾಗುವಂತೆ ನಿಂದಿಸಲಾಗಿದೆ. ತನಿಖೆ ಆರಂಭದ ಹಂತದಲ್ಲಿರುವುದರಿಂದ ಆರೋಪಿಗೆ ಜಾಮೀನು ನೀಡಿದರೆ ಸಾಕ್ಷಿ ಮೇಲೆ ಪರಿಣಾಮ ಬೀರಬಹುದು ಎಂದು ಎಸ್ ಪಿಪಿ ಪ್ರದೀಪ್ ವಾದ ಮಂಡಿಸಿದರು.

ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ನಲ್ಲಿ ಎರಡು ದಿನ ಪೊಲೀಸ್ ಕಷ್ಟಡಿಗೆ ಪಡೆದಿದ್ದ ಪೊಲೀಸರು ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ 82ನೇ ಸಿಸಿಹೆಚ್ ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ಮುನಿರತ್ನ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಒಂದು ದಿನದವರೆಗೆ ಮುನಿರತ್ನ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು.ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪೊಲೀಸರು ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...