HomeKarnatakaಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ: ಹಕ್ಕು ವರ್ಗಾವಣೆಗೆ ಕಾವೇರಿ -2 ತಂತ್ರಾಂಶ ಸಂಯೋಜನೆ

ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ: ಹಕ್ಕು ವರ್ಗಾವಣೆಗೆ ಕಾವೇರಿ -2 ತಂತ್ರಾಂಶ ಸಂಯೋಜನೆ

ದಾವಣಗೆರೆ: ಜಿಲ್ಲೆಯಲ್ಲಿ ಸೆಪ್ಟೆಂಬರ್ 9 ರಿಂದ ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿಗೊಂಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳನ್ನು ಇ-ಆಸ್ತಿ ತಂತ್ರಾಂಶ ಕಾವೇರಿ-2  ನೊಂದಿಗೆ ಸಂಯೋಜನೆಗೊಂಡಿದ್ದು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಆಸ್ತಿ ನೊಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದ ಪಡೆಯಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೆನಕ್ಷೆ 11 ಇ-ಸ್ಕೇಚ್ ಮೋಜಣಿ ತಂತ್ರಾಂಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು ಅಕ್ಟೋಬರ್ 5, 2016 ರಿಂದ ಸಂಯೋಜನೆ ಮಾಡಲಾಗಿದೆ. ಅಲ್ಲದೇ ಗ್ರಾಪಂ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ಜುಲೈ 18, 2014ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ.

ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ಚಾಮರಾಜನಗರ,ಚಿತ್ರದುರ್ಗ,ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ 2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ 9.9.2024 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದ್ದರಿಂದ ನಗರಾಭಿವೃದ್ಧಿ ಇಲಾಖೆಯು ದಾವಣಗೆರೆಯ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ-2 ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿರುವುದರಿಂದ ದಾವಣಗೆರೆ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ಸೆಪ್ಟೆಂಬರ್ 23 ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಿಂದ ಪಡೆದು ನೋಂದಣಿ ಮಾಡುತ್ತಿದ್ದು, ಸಾರ್ವಜನಿಕರು ತಮ್ಮ ಆಸ್ತಿಯ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ನಮೂದಿಸಿ ಇ-ಆಸ್ತಿ ದಾಖಲೆ ಪಡೆದುಕೊಳ್ಳುವ ಮೂಲಕ ತಂತ್ರಾಂಶದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular