HomeKarnatakaರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಸೇರಿ ಹಲವು ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ...

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಸೇರಿ ಹಲವು ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿನ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30, 2024ರ ವರಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯನಗರ, ಬೆಂಗಳೂರು-11 ಅಥವಾ ದೂರವಾಣಿ ಸಂಖ್ಯೆ : 080-26632792, 26542307 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular