alex Certify ಆಸ್ಪತ್ರೆಗೆ ನುಗ್ಗಿ ಅತ್ಯಾಚಾರಿ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಗೆ ನುಗ್ಗಿ ಅತ್ಯಾಚಾರಿ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿಗೆ ಧಾರವಾಡದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

2019 ರ ಡಿಸೆಂಬರ್ ನಲ್ಲಿ ನವಲಗುಂದದಲ್ಲಿ ಫಕ್ರುಸಾಬ್ ನದಾಫ್ ಎಂಬಾತ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ. ಸಾರ್ವಜನಿಕರು ಆರೋಪಿಯನ್ನು ಥಳಿಸಿ ಪೊಲೀಸ್ ವಶಕ್ಕೆ ಒಪ್ಪಿಸಿದ್ದರು. ಗಾಯಗೊಂಡಿದ್ದ ಫಕ್ರುಸಾಬ್ ನನ್ನು ನವಲಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆಸ್ಪತ್ರೆಗೆ ನುಗ್ಗಿದ್ದ ಬಾಲಕಿಯ ಸಂಬಂಧಿ ಸಂತೋಷ್ ಚಾಕುವಿನಿಂದ ಫಕ್ರು ಸಾಬ್ ಗೆ ಇರಿದು ಕೊಲೆ ಮಾಡಿದ್ದ.

ಸಂಬಂಧಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಫಕ್ರುಸಾಬ್ ವಿರುದ್ಧ ಆಕ್ರೋಶಗೊಂಡ ಸಂತೋಷ್ ಆಸ್ಪತ್ರೆಗೆ ನುಗ್ಗಿ ಹೊಟ್ಟೆ, ಕುತ್ತಿಗೆ ಭಾಗಕ್ಕೆ ಇರಿದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಫಕ್ರುಸಾಬ್ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ.

ಆರೋಪಿ ಸಂತೋಷ್ ವಿರುದ್ಧ ನವಲಗುಂದ ಠಾಣೆ ಪೊಲೀಸರು ಪ್ರಕರಣದ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಪೂರ್ಣಿಮಾ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಪ್ರಶಾಂತ್ ತೋರಗಲ್ ವಾದ ಮಂಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...