HomeKarnatakaಜೈಲಿನಿಂದ ಬಿಡುಗಡೆ ಖುಷಿಯಲ್ಲಿದ್ದ ಮುನಿರತ್ನಗೆ ಬಿಗ್ ಶಾಕ್: ಜಾಮೀನು ಸಿಕ್ಕರೂ ತಪ್ಪದ ಸಂಕಷ್ಟ

ಜೈಲಿನಿಂದ ಬಿಡುಗಡೆ ಖುಷಿಯಲ್ಲಿದ್ದ ಮುನಿರತ್ನಗೆ ಬಿಗ್ ಶಾಕ್: ಜಾಮೀನು ಸಿಕ್ಕರೂ ತಪ್ಪದ ಸಂಕಷ್ಟ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಆರೋಪದಡಿ ವೇಲು ನಾಯ್ಕರ್ ದಾಖಲಿಸಿರುವ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜಾಮೀನು ದೊರೆತಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ರೂ. ಬಾಂಡ್ ಇಬ್ಬರ ಶ್ಯೂರಿಟಿ ಒದಗಿಸುವಂತೆ ಸೂಚನೆ ನೀಡಲಾಗಿದೆ. ಜಾಮೀನು ದೊರೆತ ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಿ ಮುನಿರತ್ನ ಅವರನ್ನು ಜೈಲಿನಿಂದ ಹೊರಗೆ ಕರೆತರಲು ವಕೀಲರು ಸಿದ್ಧತೆ ಮಾಡಿಕೊಂಡಿದ್ದಾರೆ.

ಆದರೆ, ಹೊರಬಂದ ಬೆನ್ನಲ್ಲೇ ಅವರನ್ನು ಬಂಧಿಸಲು ಕಗ್ಗಲಿಪುರ ಠಾಣೆ ಪೊಲೀಸರು ಸಜ್ಜಾಗಿದ್ದಾರೆ. ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲು ಕಗ್ಗಲಿಪುರ ಠಾಣೆ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಬಳಿ ಸಜ್ಜಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular