
ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟೆಂಬರ್ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ.
ಜನೋತ್ಸವ
ಕರ್ನಾಟಕ ಸುವರ್ಣ ಸಂಭ್ರಮ – 50ರ ಸಮಾರೋಪ ಸಮಾರಂಭವನ್ನು ಜನೋತ್ಸವವಾಗಿ ಆಚರಿಸಲಾಗುವುದು. ಕನ್ನಡ ಜನ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ ಮಾದರಿಗಳು, ಹೋರಾಟದ ಹಾದಿಯಲ್ಲಿ ರೂಪುಗೊಂಡ ಕನ್ನಡ ಚರಿತ್ರೆಯನ್ನು ಇಂದಿನ ಕನ್ನಡ ಯುವಜನ ಸಮೂಹಕ್ಕೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.