ದಾವಣಗೆರೆ : ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಘಟನೆ ಸಂಬಂಧ 10 ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿದೆ. ಪ್ರಕರಣ ಸಂಬಂಧ ಎರಡು ಕೋಮಿನ 10 ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ದಾವಣಗೆರೆ ನಗರದ ಶಾಂತಿ ಟಾಕೀಸ್ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ನಡೆಸಲಾಗಿದ್ದು, ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಗಣಪತಿ ಮೆರವಣಿಗೆ ಸಾಗುವಾಗ ಕಿಡಿಗೇಡಿಗಳು ಕಲ್ಲು ತೂರಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಗಣಪತಿ ವಿಸರ್ಜನೆ ವೇಳೆ ರಾಜ್ಯದ ಹಲವು ಕಡೆ ಇಂತಹ ಘಟನೆಗಳು ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.