HomeKarnatakaBIG NEWS : ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ, ಇಲ್ಲಿದೆ ಮಾಹಿತಿ

BIG NEWS : ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ, ಇಲ್ಲಿದೆ ಮಾಹಿತಿ

ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆಯು ಬಳ್ಳಾರಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿಸಿದ್ದು, ಸೆ.23 ರಿಂದ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಿ, ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕು.

ಉಪಯೋಗಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು. ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.

ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದಾಗಿದೆ.ಹಾಗಾಗಿ ಸಾರ್ವಜನಿಕರು ಇ-ಆಸ್ತಿ ಸಂಯೊಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular