HomeLive Newsಇಂದು ನಡೆಯಲಿದೆ ಅಫ್ಘಾನಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯ

ಇಂದು ನಡೆಯಲಿದೆ ಅಫ್ಘಾನಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯ

ಮೊನ್ನೆ ನಡೆದ ಅಫ್ಘಾನಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ 6 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಟಿ20 ವಿಶ್ವಕಪ್ ನ ಸೇಡನ್ನು ತೀರಿಸಿಕೊಂಡಿದೆ. ಈ ಮೂಲಕ ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ತಂಡಕ್ಕೆ ಮುಖಭಂಗವಾಗಿದೆ.

ಇಂದು ಶಾರ್ಜಾ ದಲ್ಲಿ ಎರಡನೇ ಏಕದಿನ ಪಂದ್ಯ ನಡೆಯಲಿದ್ದು, ದಕ್ಷಿಣ ಆಫ್ರಿಕಾ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಅಫ್ಘಾನಿಸ್ತಾನ ತಂಡ ಈ ಪಂದ್ಯವನ್ನು ಗೆದ್ದರೆ ಸರಣಿಯನ್ನು ತನ್ನದಾಗಿಸಿಕೊಳ್ಳಲಿದ್ದು, ಹೊಸ ಇತಿಹಾಸ ಸೃಷ್ಟಿಸಲಿದೆಯಾ ಕಾದು ನೋಡಬೇಕಾಗಿದೆ.

ಬಲಿಷ್ಠ ತಂಡದ ಎದುರು ಸರಣಿಯನ್ನು ಗೆದ್ದರೆ ಇಂದು ಆಫ್ಘಾನಿಸ್ತಾನ ತಂಡಕ್ಕೆ ಮರೆಯಲಾಗದ ದಿನವಾಗಲಿದೆ. ಕ್ರಿಕೆಟ್ ಪ್ರೇಮಿಗಳು ಈ ಪಂದ್ಯವನ್ನು ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular