HomeEntertainmentಹುಟ್ಟು ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್ವುಡ್ ನ ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್

ಹುಟ್ಟು ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್ವುಡ್ ನ ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್

ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಮೆಲೋಡಿ ಹಾಡುಗಳಿಗೆ ಧ್ವನಿ ನೀಡುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿರುವ ಯುವ ಗಾಯಕಿ ಐಶ್ವರ್ಯ ರಂಗರಾಜನ್  ಇಂದು ತಮ್ಮ 27ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.

ಆರಂಭದಲ್ಲಿ ‘ಎದೆ ತುಂಬಿ ಹಾಡುವೆನು’ ಹಾಗೂ ‘ಸರಿಗಮಪ’  ಶೋ ನಲ್ಲಿ ಸ್ಪರ್ಧಿಯಾಗಿ  ಕಾಣಿಸಿಕೊಂಡಿದ್ದ ಐಶ್ವರ್ಯ ರಂಗರಾಜನ್ ಅವರಿಗೆ ಸಿನಿಮಾಗಳಲ್ಲಿ ಹಾಡುವ ಅವಕಾಶ  ಸಿಕ್ಕಿತು. ನಂತರ ಸಾಕಷ್ಟು ಹಾಡುಗಳಿಗೆ ಧ್ವನಿಯಾಗಿದ್ದು, ‘ಪುಷ್ಪವತಿ’ ಸೇರಿದಂತೆ  ‘ಮಳೆಯೇ ಮಳೆಯೇ’ ‘ಬೇಬಿ ಡ್ಯಾನ್ಸ್  ಫ್ಲೋರ್ ರೆಡಿ’ ಯೂಟ್ಯೂಬ್ ನಲ್ಲಿ ಹೊಸ ದಾಖಲೆ ಬರೆದವು.

ಇದುವರೆಗೂ ಸುಮಾರು ನೂರಕ್ಕೂ ಹೆಚ್ಚು ಗೀತೆಗಳಿಗೆ ಧ್ವನಿಯಾಗಿರುವ ಇವರು ಸ್ಯಾಂಡಲ್ ವುಡ್ ನ ಬೇಡಿಕೆಯ ಗಾಯಕಿಯಾಗಿದ್ದಾರೆ. ಇಂದು ಹಲವಾರು ನಟ ನಟಿಯರು ಸಾಮಾಜಿಕ ಜಾಲತಾಣದಲ್ಲಿ ಐಶ್ವರ್ಯ ರಂಗರಾಜನ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular