HomeKarnatakaಸಾರ್ವಜನಿಕರೇ ಎಚ್ಚರ : ಸರ್ಕಾರ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮವಾಗಿ ಪ್ರವೇಶಿಸಿದರೆ ಕಾನೂನು ಕ್ರಮ ಫಿಕ್ಸ್

ಸಾರ್ವಜನಿಕರೇ ಎಚ್ಚರ : ಸರ್ಕಾರ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮವಾಗಿ ಪ್ರವೇಶಿಸಿದರೆ ಕಾನೂನು ಕ್ರಮ ಫಿಕ್ಸ್

ಶಿವಮೊಗ್ಗ : ಜಿಲ್ಲೆಯ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಸಾಗುವಳಿ, ಮನೆ ನಿರ್ಮಾಣ, ವಾಣಿಜ್ಯೋದ್ದೇಶಕ್ಕೆ ದುರ್ಬಳಕೆ ಹಾಗೂ ಪರಭಾರೆ ಮಾಡುತ್ತಿರುವ ವಿಷಯ ಗಮನಕ್ಕೆ ಬಂದಿದ್ದು, ಅಂತಹ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೈಗಾರಿಕಾ ಪ್ರದೇಶದ ಅಭಿವೃದ್ಧಿಗಾಗಿ ಕಾಯ್ದಿರಿಸಿದ ಜಮೀನುಗಳನ್ನು ಖರೀದಿಸದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಅವರು ಮನವಿ ಮಾಡಿದರು.

ಆಟೋಕಾಂಪ್ಲೆಕ್ಸ್ ಪ್ರದೇಶದಲ್ಲಿ ಶುದ್ಧಕುಡಿಯುವ ನೀರನ್ನು ಪೂರೈಸಲು ಕೈಗಾರಿಕೋದ್ಯಮಿಗಳು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಈಗಾಗಲೇ ಮಹಾನಗರಪಾಲಿಕೆ ವತಿಯಿಂದ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಅಗತ್ಯವಿದ್ದಲ್ಲಿ ಒಂದೆರೆಡು ನಲ್ಲಿಗಳನ್ನು ಅಳವಡಿಸಲು ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಲಾಗುವುದು. ಆದಾಗ್ಯೂ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಅದರ ನಿರ್ವಹಣೆ ದೃಷ್ಟಿಯಿಂದ ಪಾಲಿಕೆಗೆ ನಿಯಮಾನುಸಾರ ಅಲ್ಪಮಟ್ಟಿನ ಹಣಪಾವತಿಸಿ ನೀರನ್ನು ಬಳಸಿಕೊಳ್ಳುವುದು ಸರಿಯಾದ ಕ್ರಮವಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನಿರ್ಮಿಸಲಾಗಿರುವ ಹಾಗೂ ನಿರ್ಮಾಣಗೊಂಡಿರುವ ಕಟ್ಟಡಗಳಲ್ಲಿ ಸಹಜವಾಗಿ ಮಳೆ ನೀರು ಸಂಗ್ರಹಿಸುವಂತೆ ಹಾಗೂ ಅಂತರ್ಜಲ ಹೆಚ್ಚಿಸುವಲ್ಲಿ ವಿಶೇಷ ಗಮನಹರಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ಅಗತ್ಯವಿದ್ದಲ್ಲಿ ಪರಿಣಿತ ಸಂಪನ್ಮೂಲ ವ್ಯಕ್ತಿಗಳನ್ನು ತರಬೇತಿಗಾಗಿ ಕಳುಹಿಸಿಕೊಡುವ ಏರ್ಪಾಟು ಮಾಡಲಾಗುವುದು ಎಂದರು.

ನಿಧಿಗೆ ಕೈಗಾರಿಕಾ ಪ್ರದೇಶದಲ್ಲಿನ ಮೆ.ಶಾಹಿ ಎಕ್ಸ್ಪೋರ್ಟ್ಸ್ ಘಟಕದಿಂದ ವಾಯುಮಾಲಿನ್ಯವಾಗುತ್ತಿದ್ದು, ಸುತ್ತಮುತ್ತಲ ಪ್ರದೇಶದಲ್ಲಿನ ಕೈಗಾರಿಕಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕಿರಿಕಿರಿ ಉಂಟಾಗುತ್ತಿದೆ. ಕೆಲವು ಸಂದರ್ಭಗಳಲ್ಲಿ ಉಸಿರಾಡುವುದು ಕಷ್ಟಕರವಾಗಿದೆ. ಇದರಿಂದಾಗಿ ಅನಾರೋಗ್ಯಕ್ಕೆ ಈಡಾಗುವ ಬೀತಿಯಿಂದ ಸಿಬ್ಬಂಧಿಗಳು ಕೆಲಸದಿಂದ ವಿಮುಖರಾಗುತ್ತಿದ್ದಾರೆ. ಈ ಬಗ್ಗೆ ಮಾಲಿನ್ಯ ನಿಯಂತ್ರಣಾಧಿಕಾರಿಗಳ ಗಮನಸೆಳೆಯಲಾಗಿದ್ದು, ಯಾವುದೇ ಕ್ರಮವಾಗಿಲ್ಲ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿಯ ಸದಸ್ಯರು ಜಿಲ್ಲಾಧಿಕಾರಿಗಳ ಗಮನಸೆಳೆದರು. ತಕ್ಷಣ ಜಿಲ್ಲಾಧಿಕಾರಿಗಳು ಮಾಲಿನ್ಯ ನಿಯಂತ್ರಣಾಧಿಕಾರಿಗಳಿಗೆ ತಕ್ಷಣದ ನಿಯಂತ್ರಣ ಕ್ರಮಗಳನ್ನು ಕೈಗೊಂಡು ಮಾಹಿತಿ ನೀಡುವಂತೆ ಸೂಚಿಸಿದ ಅವರು, ಸ್ಥಳಕ್ಕೆ ಖುದ್ದುಭೇಟಿ ನೀಡಿ, ಕಾರ್ಮಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಯಾರಿಗೂ ತೊಂದರೆಯಾಗದಂತೆ ಕ್ರಮವಹಿಸಲು ಸೂಚಿಸಿದರು.

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಫೌಂಡ್ರಿ ಕೈಗಾರಿಕಾ ಘಟಕಗಳ ಅನುಪಯುಕ್ತ ಮರಳನ್ನು ವಿಲೇಮಾಡಲು ಭೂಮಿಯನ್ನು ನೀಡುವಂತೆ ಕೈಗಾರಿಕೋದ್ಯಮಿಗಳು ಮನವಿ ಸಲ್ಲಿಸಿದಾಗ, ಕೋರಿಕೆಯ ಪ್ರದೇಶದ ವಾಸ್ತವ ಸಂಗತಿಗಳನ್ನು ಪರಿಶೀಲಿಸಿ, ಭೂಮಿ ಮಂಜೂರು ಮಾಡಲು ವರದಿ ನೀಡುವಂತೆ ಮಾಲಿನ್ಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದರು.

ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ 110ಕೆ.ವಿ.ವಿದ್ಯುತ್ ಉಪಕೇಂದ್ರ ಸ್ಥಾಪಿಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದ ಅವರು, ಸೊರಬ ತಾಲೂಕು ಆನವಟ್ಟಿ ಸಮೀಪ ಬಾರಂಗಿಯಲ್ಲಿರುವ ಮೆ.ಬೆಸ್ಟಲರಿ ಇಂಡಸ್ಟ್ರಿಸ್ಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡದಿರುವುದರಿಂದ ಘಟಕ ನಡೆಸುವುದು ಕಷ್ಟಸಾಧ್ಯವಾಗಿದೆ. ನಿರಂತರ ವಿದ್ಯುತ್ ಸರಬರಾಜು ಮಾಡಿಸುವಂತೆ ಮನವಿ ಸಲ್ಲಿಸಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿ, ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕ್ರಮವಹಿಸುವಂತೆ ಮೆಸ್ಕಾಂನ ಸೂಪರಿಂಟೆಂಡೆಂಟ್ ಇಂಜಿನಿಯರ್ ಅವರಿಗೆ ಸೂಚಿಸಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular