HomeKarnatakaBIG NEWS: ಬಿಜೆಪಿ ನಾಯಕರ ಹೇಳಿಕೆಗಳಿಂದಲೇ ಗಲಾತೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

BIG NEWS: ಬಿಜೆಪಿ ನಾಯಕರ ಹೇಳಿಕೆಗಳಿಂದಲೇ ಗಲಾತೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು: ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಾಯಕರ ಹೇಳಿಕೆಗಳಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ ಎಂದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಾರಿ ಅರವತ್ತು ಸಾವಿರ ಗಣೇಶಗಳ ಪ್ರತಿಷ್ಠಾಪನೆ ಮಾದಲಾಗಿದೆ. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ ಎಂದರು.

ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಬಿಜೆಪಿ ನಾಯಕರ ಪ್ರಚೋದನಕಾರಿ ಹೇಳಿಕೆಗಳಿಂದಾಗಿಯೇ ಕೆಲ ಘಟನೆಗಳು ನಡೆಯುತ್ತವೆ. ಇದಕ್ಕೆ ಬಿಜೆಪಿ ಕಾರಣ ಎಂದು ಕಿಡಿಕಾರಿದರು. ಎರಡು ಗಲಾಟೆ ಪ್ರಕರಣಗಳು ನಡೆದಿವೆ. ಸದ್ಯ ಪರಿಸ್ಥಿತಿ ನಿಯಂತ್ರಿಸಲಾಗಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ 2021 ರಿಂದ ಲೋಕಾಯುಕ್ತದವರು ತನಿಖೆ ನಡೆಸದಿರುವ ಬಗ್ಗೆ ಮಾತನಾಡಿದ ಸಿಎಂ, ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ , ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular