HomeKarnatakaBIG NEWS: ರಾಜ್ಯದಲ್ಲಿ ಸರ್ಕಾರ, ಪೊಲೀಸ್‌ ವ್ಯವಸ್ಥೆ ಇದೇ ಎಂಬುದೇ ಮರೆತು ಹೋಗುವಂತಾಗಿದೆ: ವಿಜಯೇಂದ್ರ ವಾಗ್ದಾಳಿ

BIG NEWS: ರಾಜ್ಯದಲ್ಲಿ ಸರ್ಕಾರ, ಪೊಲೀಸ್‌ ವ್ಯವಸ್ಥೆ ಇದೇ ಎಂಬುದೇ ಮರೆತು ಹೋಗುವಂತಾಗಿದೆ: ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ನಾಗಮಂಗಲದ ಬಳಿಕ ದಾವಣಗೆರೆಯಲ್ಲಿಯೂ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಘಟನೆ ನಡೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ದಾವಣಗೆರೆಯಲ್ಲಿ ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಹಿಂದೂಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ರಾಜ್ಯದಲ್ಲಿ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಸರ್ಕಾರ, ಪೊಲೀಸ್‌ ವ್ಯವಸ್ಥೆ ಇದೇ ಎಂಬುದೇ ಮರೆತು ಹೋಗುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುಡಾರಿಗಳಿಗೆ, ದೇಶದ್ರೋಹಿಗಳಿಗೆ ಕಾಂಗ್ರೆಸ್‌ ಸರ್ಕಾರದ ಮೃದು ಧೋರಣೆಯಿಂದಾಗಿ ಧೈರ್ಯ ಬಂದಿದೆ. ಅಲ್ಪಸಂಖ್ಯಾತರಿಂದಲೇ ಅಧಿಕಾರಕ್ಕೆ ಬಂದಿದ್ದೇವೆ ಎಂಬ ಭ್ರಮೆಯಲ್ಲಿರುವ ಆಡಳಿತ ಪಕ್ಷ ಸಂಪೂರ್ಣವಾಗಿ ಓಲೈಕೆ ರಾಜಕಾರಣವನ್ನು ಮಾಡುತ್ತಿರುವುದರ ಪರಿಣಾಮ ದೇಶದ್ರೋಹಿಗಳು ಅಟ್ಟಹಾಸದಿಂದ ಮೆರೆಯುತ್ತಿದ್ದಾರೆ ಎಂದು ಗುಡುಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular