‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ಯಡಿ ಅಭಿವೃದ್ಧಿಹೊಂದಿದ ಸರ್ಕಾರಿ ಶಾಲೆಗಳ ವಿಡಿಯೋ ಶೇರ್ ಮಾಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಭವನದಲ್ಲಿ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದ ಅಡಿಯಲ್ಲಿ ಹಳೇ ವಿದ್ಯಾರ್ಥಿಗಳ ಸಹಕಾರದಿಂದ ಅಭಿವೃದ್ಧಿಹೊಂದಿದ ಸರ್ಕಾರಿ ಶಾಲೆಗಳ ವಿಡಿಯೋವನ್ನು ರಾಜ್ಯದಲ್ಲಿ ಹಳೇ ವಿದ್ಯಾರ್ಥಿಗಳಿಂದ ರಚಿತವಾಗಿರುವ ಸುಮಾರು 33 ಸಾವಿರ ವಾಟ್ಸಪ್ ಗ್ರೂಪ್ ಗಳಿಗೆ ಶೇರ್ ಮಾಡಿದರು.

“ನಮ್ಮ ಶಾಲೆ ನಮ್ಮ ಜವಾಬ್ದಾರಿ” ಒಂದು ಉತ್ತಮ ಯೋಜನೆಯಾಗಿದ್ದು ತಾವು ಕಲಿತ ಶಾಲೆಗೆ ತಮ್ಮ ಕೈಲಾದ ಕೊಡುಗೆ ನೀಡಿ ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸುವುದಾಗಿದೆ. ಈ ಯೋಜನೆಯಿಂದಾಗಿ ಸರ್ಕಾರಿ ಶಾಲೆಗಳ ಅಭ್ಯುದಯಕ್ಕೆ ಸಹಕಾರವಾಗುತ್ತಿದೆ.

ಸರ್ಕಾರದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು, ಸಾಮಾಜಿಕ ಕಳಕಳಿ ಹೊಂದಿರುವವರು ಹಾಗೂ ದಾನಿಗಳ ಸಹಕಾರದಿಂದ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿವೆ. ಈ ಕಾರ್ಯಗಳು ಎಲ್ಲರಲ್ಲೂ ಪ್ರೇರಣೆಯಾದರೆ ನಮ್ಮ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಬಹುದು. ಈ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ಶ್ರೀಮತಿ ಬಿ.ಬಿ ಕಾವೇರಿ, ರಾಜ್ಯ ಯೋಜನಾ ನಿರ್ದೇಶಕರಾದ ಶ್ರೀ ರಮೇಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read