alex Certify ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತ ರೂ. 2.50 ಲಕ್ಷದೊಳಗಿರುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು, ವೆಬ್ಸೈಟ್ www.sw.kar.nic.in ರ ವಿದ್ಯಾರ್ಥಿವೇತನ ಪೋರ್ಟಲ್ https://ssp.postmatric.karnataka.gov.in/homepage.aspx ರಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಶಿವಮೊಗ್ಗ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-240512 ಸಂಪರ್ಕಿಸುವುದು.

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಮತ್ತು ಸ್ನಾತ್ತಕೋತ್ತರ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in ರಲ್ಲಿ ಅಕ್ಟೋಬರ್ 05 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ – 08182-220206, ಶಿವಮೊಗ್ಗ ವಿಸ್ತರಣಾಧಿಕಾರಿಗಳು- 9731979131, ಸಾಗರ ವಿಸ್ತರಣಾಧಿಕಾರಿಗಳು-9110278031, ಶಿವಮೊಗ್ಗ ಜಿಲ್ಲಾ ಮಾಹಿತಿ ಕೇಂದ್ರ-7676888388, ತಾಲೂಕು ಮಾಹಿತಿ ಕೇಂದ್ರಗಳಾದ ಭದ್ರಾವತಿ-9538853680, ತೀರ್ಥಹಳ್ಳಿ-8861982835, ಶಿಕಾರಿಪುರ-7829136724, ಸಾಗರ-7338222907, ಸೊರಬ-9513815513, ಹೊಸನಗರ-9008447029 ಗಳನ್ನು ಸಂಪರ್ಕಿಸುವುದು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...