HomeKarnatakaBREAKING : ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಮತ್ತೆ ಗಲಾಟೆ, ಇಬ್ಬರು ಯುವಕರಿಗೆ ಚಾಕು ಇರಿತ

BREAKING : ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಮತ್ತೆ ಗಲಾಟೆ, ಇಬ್ಬರು ಯುವಕರಿಗೆ ಚಾಕು ಇರಿತ

ಮಂಡ್ಯ : ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದು ಯುವಕರಿಗೆ ಚಾಕು ಇರಿದ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿಯಲ್ಲಿ ನಡೆದಿದೆ.

ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ಸಚಿನ್, ನಂಜುಂಡಸ್ವಾಮಿ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿಯಲಾಗಿದೆ. ಸ್ನೇಹಿತರ ಜೊತೆ ಡ್ಯಾನ್ಸ್ ಮಾಡುತ್ತಿದ್ದ ಸಚಿನ್ ಹಾಗೂ ನಂಜುಂಡಸ್ವಾಮಿ ಮೇಲೆ ದರ್ಶನ್, ಲೋಕೇಶ ಹಾಗೂ ಮತ್ತಿತರರು ಗಲಾಟೆ ಮಾಡಿ ಹಲ್ಲೆ ನಡೆಸಿದ್ದಾರೆ.ದರ್ಶನ್ ಮತ್ತು ಸಚಿನ್ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಳೇ ದ್ವೇಷದ ಹಿನ್ನೆಲೆ ಅದೇ ಊರಿನ ದರ್ಶನ್ ಮತ್ತು ಆತನ ಸಹಚರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular