HomeKarnatakaBIG NEWS: ಐಜಿಪಿ ರಮೇಶ್ ಬಾನೋತ್ ಮಗನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ; ರಸ್ತೆಯಲ್ಲಿ ಕಾರು ನಿಲ್ಲಿಸಿ...

BIG NEWS: ಐಜಿಪಿ ರಮೇಶ್ ಬಾನೋತ್ ಮಗನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ; ರಸ್ತೆಯಲ್ಲಿ ಕಾರು ನಿಲ್ಲಿಸಿ ದಾಳಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರೋಡ್ ರೇಜ್ ಘಟನೆಗಳು ಹೆಚ್ಚುತ್ತಿವೆ. ಐಜಿಪಿ ರಮೇಶ್ ಬಾನೋತ್ ಮಗನ ಮೇಲೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ.

ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಐಪಿಎಸ್ ಅಧಿಕಾರಿ ರಮೇಶ್ ಬಾನೋತ್ ಅವರ ಪುತ್ರ ಶ್ರೀಸಾಯಿ ಪ್ರೀತಂ ಬಾನೋತ್ ಮೇಲೆ ಹಲ್ಲೆ ನಡೆದಿದೆ. ಬ್ಯಾಟರಾಯನಪುರ ಸಿಗ್ನಲ್ ನಲ್ಲಿ ಕಾರು ನಿಲ್ಲಿಸಿದ್ದ ವೇಳೆ ಬ್ಲೂ ಬಣ್ಣದ ಕಾರಿನಲ್ಲಿ ಬಂದ ಇಬ್ಬರು, ಸೌಂಡ್ ಹಾಕಿ ಕಿರಿಕಿರಿ ಮಾಡುತ್ತಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಕಾರನ್ನು ತಡೆದ ಇಬ್ಬರು ದುಷ್ಕರ್ಮಿಗಳು, ಪ್ರೀತಂ ಬಾನೋತ್ ಮೇಲೆ ಹಲ್ಲೆ ನಡೆಸಿ ಮುಖಕ್ಕೆ ಗುದ್ದಿದ್ದಾರೆ.

ಹಲ್ಲೆ ಬಳಿಕ ಇಬ್ಬರು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಪ್ರೀತಂ ಬಾನೋತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular