alex Certify BIG NEWS: ರಾಜ್ಯದ ದೇವಾಲಯಗಳ ಪ್ರಸಾದ ಪರೀಕ್ಷೆಗೆ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ ದೇವಾಲಯಗಳ ಪ್ರಸಾದ ಪರೀಕ್ಷೆಗೆ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ

ಬೆಂಗಳೂರು: ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ನೀಡುವ ಪ್ರಸಾದದ ಗುಣಮಟ್ಟ ಉತ್ತಮಾವಾಗಿದೆ. ಸುರಕ್ಷತವಾಗಿಯೂ ಇದೆ. ಆದಾಗ್ಯೂ ಭಕ್ತರಿಗೆ ಯಾವುದೇ ಅನುಮಾನಕ್ಕೆ ಆಸ್ಪದ ನೀಡಬಾರದು ಎಂಬ ಕಾರಣಕ್ಕೆ ಎಲ್ಲಾ ದೇವಾಲಯಗಳ ಪ್ರಸಾದ ಪರೀಕ್ಷೆಗೆ ಒಳಪಡಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದ್ದು, ಇಂತದ್ದೊಂದು ಪ್ರಮಾದ ಬೆಳಕಿಗೆ ಬಂದ ಬೆನ್ನಲ್ಲೇ ಕರ್ನಾಟಕ ಮುಜರಾಯಿ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ತಯಾರಿಗೆ, ಸೇವೆಗೆ ನಂದಿನಿ ತುಪ್ಪ ಕಡ್ಡಾಯವಾಗಿ ಬಳಸುವಂತೆ ಆದೇಶ ಹೊರಡಿಸಿದೆ. ಇದೀಗ ಮುಜರಾಯಿ ಇಲಾಖೆ ಅಡಿಯಲ್ಲಿ ಬರುವ ದೇವಾಲಯಗಳ ಪ್ರಸಾದ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ.

ದೇವಾಲಯಗಳ ಪ್ರಸಾದವನ್ನು ಪ್ರಯೋಗಾಲಯಗಳಲ್ಲಿ ಪರೀಕ್ಷಿಸಿ ಪರಿಶೀಲನೆಗೆ ಒಳಪಡಿಸಬೇಕು ಎಂದು ನಿರ್ದೇಶಿಸಲಾಗಿದೆ. ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 34,000ಕ್ಕೂ ಹೆಚ್ಚು ದೇವಾಲಯಗಳಿದ್ದು, ಎಲ್ಲಾ ದೇವಾಲಯಗಳ ಪ್ರಸಾದ ಪರೀಕ್ಷೆ ನಡೆಸಬೇಕು. ದೇವಾಲಯದ ಪ್ರಸಾದದ ವಿಚಾರದಲ್ಲಿ ಜನರಿಗೆ ಯಾವುದೇ ಅನುಮಾನ ಇರಬಾರದು. ಹೀಗಾಗಿ ಪ್ರಸಾದಗಳ ಪರೀಕ್ಷೆ ನಡೆಸುವಂತೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...