ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ, ಅನ್ನದಾಸೋಹದ ವ್ಯವಸ್ಥೆಯಿದ್ದು, ಶುದ್ಧ ತುಪ್ಪವನ್ನೇ ಬಳಸಲಾಗುತ್ತಿದೆ. ಹೀಗಾಗಿ ಭಕ್ತರು ಪ್ರಸಾದ ಸ್ವೀಕರಿಸಲು ಯಾವುದೇ ಆತಂಕಪಡಬೇಕಿಲ್ಲ ಎಂದು ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಅದಾಗ್ಯೂ ನಾವು ಈ ಬಗ್ಗೆ ಎಲ್ಲ ದೇವಾಲಯಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದೇವೆ. ಪ್ರಸಾದ ತಯಾರಿಕೆ, ವಿತರಣೆಯಲ್ಲಿ ಶುಚಿತ್ವ ಕಾಪಾಡಬೇಕು. ಗುಣಮಟ್ಟದ ನಂದಿನಿ ತುಪ್ಪವನ್ನೇ ಬಳಸಬೇಕು ಎಂದು ತಿಳಿಸಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.