ಉತ್ತರ ಗಾಜಾದ ಶಾಲೆಯೊಂದರ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯದ ಹೇಳಿದೆ.
ಹಿಂದೆ ಶಾಲೆಯಾಗಿದ್ದ ಇಲ್ಲಿ ಸ್ಥಾಪಿಸಲಾದ ಹಮಾಸ್ ಕಮಾಂಡ್ ಸೆಂಟರ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದೆ ಎಂದು ಇಸ್ರೇಲಿ ಸೇನೆಯು ವರದಿ ಮಾಡಿದೆ.
ಗಾಜಾ ನಗರದ ಝೈಟೌನ್ ಪ್ರದೇಶದಲ್ಲಿ ನಡೆದ ವಾಯುದಾಳಿಯಲ್ಲಿ ಇನ್ನೂ 30 ಜನರು ಗಾಯಗೊಂಡಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ಬಲಿಯಾದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು. ಮೃತರು ಮತ್ತು ಗಾಯಾಳುಗಳನ್ನು ಯಾವ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂಬುದರ ಕುರಿತು ಅಧಿಕಾರಿಗಳು ಇನ್ನೂ ವಿವರಗಳನ್ನು ನೀಡಿಲ್ಲ.
ಹಮಾಸ್‌ನ “ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್” ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದೆ. ಅದು ಹಿಂದೆ ಶಾಲೆಯಾಗಿ ಕಾರ್ಯನಿರ್ವಹಿಸುತ್ತಿತ್ತು. ಅಲ್ಲಿ ಯುದ್ಧಸಾಮಗ್ರಿಗಳ ಬಳಕೆ ಮತ್ತು ವೈಮಾನಿಕ ಕಣ್ಗಾವಲು ಸೇರಿದಂತೆ ನಾಗರಿಕರ ಸಾವುನೋವುಗಳನ್ನು ತಪ್ಪಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ.