HomeKarnatakaSHOCKING: ಮನೆಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ 6ನೇ ತರಗತಿ ಬಾಲಕ ಸಾವು

SHOCKING: ಮನೆಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ 6ನೇ ತರಗತಿ ಬಾಲಕ ಸಾವು

ಹಾಸನ: ಮನೆಯಲ್ಲಿ ಕುಳಿತಿದ್ದಾಗಲೇ 12 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಚನ್ನಾಪುರ ಗ್ರಾಮದ ಸ್ನೇಹಿತ್ ಮೃತಪಟ್ಟ ಬಾಲಕ. ಗ್ರಾಮದ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಸ್ನೇಹಿತ್ ಶುಕ್ರವಾರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶಾಲೆಗೆ ರಜೆ ನೀಡಿದ್ದರಿಂದ ಮನೆಯಲ್ಲಿಯೇ ಇದ್ದ.

ಬೆಳಗ್ಗೆ ತಿಂಡಿ ತಿಂದು ಮನೆಯಲ್ಲಿ ಕುಳಿತಿದ್ದ ವೇಳೆಯೇ ಆತನಿಗೆ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಬಾಲಕನ ತಂದೆ ಎರಡು ವರ್ಷದ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಶಾಸಕ ಸಿಮೆಂಟ್ ಮಂಜು ಅವರು ಬಾಲಕನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular