alex Certify ಮತ್ತೆ ತುಂಬಿದ ತುಂಗ ಭದ್ರಾ ಜಲಾಶಯಕ್ಕೆ ಇಂದು ಸಿಎಂ ಬಾಗಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ತುಂಬಿದ ತುಂಗ ಭದ್ರಾ ಜಲಾಶಯಕ್ಕೆ ಇಂದು ಸಿಎಂ ಬಾಗಿನ

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.

ಕ್ರಸ್ಟ್ ಗೇಟ್ ದುರಸ್ತಿ ಕೆಲಸ ಮಾಡಿದ ಸಿಬ್ಬಂದಿ, ಕಾರ್ಮಿಕರನ್ನು ಸಿಎಂ ಸನ್ಮಾನಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು, ನಾಯಕರು ಭಾಗವಹಿಸಲಿದ್ದಾರೆ.

ತುಂಗಭದ್ರಾ ಜಲಾಶಯ ಮತ್ತೆ ಬಹುತೇಕ ಭರ್ತಿಯಾಗಿದೆ. ಆಗಸ್ಟ್ ನಲ್ಲಿ ಮೂರು ಬಾರಿ ಬಾಗಿನ ಅರ್ಪಣೆ ಕಾರ್ಯಕ್ರಮ ಮುಂದೂಡಲಾಗಿತ್ತು. ಆಗಸ್ಟ್ 10ರಂದು ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿತ್ತು. ಆಗಸ್ಟ್ 13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಿಬಿ ಡ್ಯಾಂ ವೀಕ್ಷಣೆ ಮಾಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...