ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಕೊಡುಗೆಯಾಗಿ ತುಟ್ಟಿ ಭತ್ಯೆ ಹೆಚ್ಚಳ ಘೋಷಣೆ ಮಾಡುವ ಸಾಧ್ಯತೆ ಇದೆ. ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ಘೋಷಿಸುವ ಸಾಧ್ಯತೆ ಇದೆ.
ಜುಲೈ 1 ರಿಂದಲೇ ಪೂರ್ವಾನ್ವಯವಾಗುವಂತೆ ಮೂಲವೇತನದ ಶೇಕಡ 3-4ರಷ್ಟು ಡಿಎ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕಳೆದ ವರ್ಷ ಅಕ್ಟೋಬರ್ ಮೊದಲ ವಾರ ಡಿಎ ಹೆಚ್ಚಳ ಘೋಷಣೆ ಮಾಡಲಾಗಿತ್ತು.
ಕೇಂದ್ರ ಸರ್ಕಾರ ನೌಕರರಿಗೆ ತುಟ್ಟಿ ಭತ್ಯೆ(DA) ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಪರಿಹಾರ(DR) ನೀಡಲಾಗುವುದು. ಜನವರಿ ಮತ್ತು ಜುಲೈನಲ್ಲಿ ವರ್ಷಕ್ಕೆ ಎರಡು ಬಾರಿ ಡಿಎ ಮತ್ತು ಡಿಆರ್ ಪರಿಷ್ಕರಿಸಲಾಗುತ್ತದೆ. ಈ ತಿಂಗಳಾಂತ್ಯಕ್ಕೆ ಇಲ್ಲವೇ ಮುಂದಿನ ತಿಂಗಳು ಮೊದಲ ವಾರ ಡಿಎ, ಡಿಆರ್ ಹೆಚ್ಚಳ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.