alex Certify ಶಿವಮೊಗ್ಗದಲ್ಲಿ ಇಂದು ಈದ್ ಮಿಲಾದ್ ಮೆರವಣಿಗೆ: 5 ಡ್ರೋಣ್, 100 ವಿಡಿಯೋಗ್ರಾಫರ್ ಕಣ್ಗಾವಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಇಂದು ಈದ್ ಮಿಲಾದ್ ಮೆರವಣಿಗೆ: 5 ಡ್ರೋಣ್, 100 ವಿಡಿಯೋಗ್ರಾಫರ್ ಕಣ್ಗಾವಲು

ಶಿವಮೊಗ್ಗ: ಈದ್ ಮಿಲಾದ್ ಅಂಗವಾಗಿ ಇಂದು ಶಿವಮೊಗ್ಗದಲ್ಲಿ ಮೆರವಣಿಗೆ ಆಯೋಜಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಗಾಂಧಿ ಬಜಾರ್ ಜಾಮಿಯಾ ಮಸೀದಿಯಿಂದ ಆರಂಭವಾಗಲಿರುವ ಮೆರವಣಿಗೆ ವಿವಿಧ ರಸ್ತೆಗಳಲ್ಲಿ ಹಾದು ಅಮೀರ್ ಅಹ್ಮದ್ ಸರ್ಕಲ್ ತಲುಪಲಿದೆ.

ಅಮೀರ್ ಅಹ್ಮದ್ ವೃತ್ತವನ್ನು ಹಸಿರು ಹೊದಿಕೆಗಳಿಂದ ಅಲಂಕರಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಹಸಿರು ಧ್ವಜ ಕಟ್ಟಲಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಮೆರವಣಿಗೆ ಸಾಗುವ ಮತ್ತು ಸಂಪರ್ಕ ರಸ್ತೆಗಳಲ್ಲಿ ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಅಮೀರ್ ಅಹ್ಮದ್ ಸರ್ಕಲ್, ಗಾಂಧಿ ಬಜಾರ್ ಮತ್ತು ಸುತ್ತಲಿನ ಮಾರ್ಗದಲ್ಲಿ ಎಲ್ಲಾ ವಾಹನಗಳ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ.

ಶಿವಮೊಗ್ಗ ನಗರದಲ್ಲಿ ನಡೆಯುವ ಈದ್ ಮಿಲಾದ್ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆ 3 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 25 ಪೊಲೀಸ್  ಉಪಾಧೀಕ್ಷಕರು, 60 ಪೋಲಿಸ್ ನಿರೀಕ್ಷಕರು, 110 ಪೊಲೀಸ್ ಉಪನಿರೀಕ್ಷಕರು, 200 ಸಹಾಯಕ ಪೊಲೀಸ್ ನಿರೀಕ್ಷಕರು, 3500 ಪೊಲೀಸ್ ಹೆಡ್ ಕಾನ್ಸ್ ಟೆಬಲ್, ಪೊಲೀಸ್ ಕಾನ್ಸ್ ಟೆಬಲ್ ಮತ್ತು ಗೃಹರಕ್ಷಕ ದಳ ಸಿಬ್ಬಂದಿಗಳು, 1-RAF  ತುಕಡಿ, 8 ಡಿಎಆರ್ ತುಕಡಿ, 1 QRT ತುಕಡಿ,  1 DSWAT ತುಕಡಿ, 10 ಕೆಎಸ್ಆರ್.ಪಿ ತುಕಡಿಗಳು,  5 ಡ್ರೋಣ್ ಕ್ಯಾಮರಾಗಳು, 100 ವಿಡಿಯೋಗ್ರಾಫರ್ ಗಳನ್ನು ನಿಯೋಜಿಸಲಾಗಿದೆ.

ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಎಸ್ಪಿ ಮಿಥುನ್ ಕುಮಾರ್ ಬ್ರೀಫಿಂಗ್ ನಡೆಸಿ, ಬಂದೋಬಸ್ತ್ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...