ತುಮಕೂರು: ಬೈಕ್ ಗೆ ಹಿಂಬದಿಯಿಂದ ಟ್ಯಾಂಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ತಿಮ್ಮರಾಜನಹಳ್ಳಿ ಬಳಿ ನಡೆದಿದೆ.
ಬೈಕ್ ನಲ್ಲಿದ್ದ ತೇಜಸ್ವಿನಿ (32) ಹಾಗೂ ರಂಗನಾಥ್ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಿಮ್ಮರಾಜನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ.
ಬೈಕ್ ಶಿರಾ ಪಟ್ಟಣದಿಂದ ತುಮಕೂರು ಕಡೆಗೆ ಬರುತ್ತಿತ್ತು. ಈ ವೇಳೆ ಹಿಂಬದಿಯಿಂದ ಬಂದ ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.