alex Certify BREAKING NEWS: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ

ಕೋಲಾರ: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ.

ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮಣ್ಣ ಎಂಬುವವರಿಗೆ ಸೇರಿದ ಮಂಡಿಯಲ್ಲಿ ಈ ಘಟನೆ ನಡೆದಿದೆ. ಸುಮಾರು 1000ಕ್ಕೂ ಹೆಚ್ಚು ಟೊಮೆಟೊ ಕ್ರೇಟ್ ಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...