alex Certify SHOCKING: ತಲೆನೋವು ತಾಳದೆ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ತಲೆನೋವು ತಾಳದೆ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ತಲೆನೋವು ತಾಳಲಾರದೆ ಮಹಿಳೆಯೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಕಾಮಗೆರೆ ನಿವಾಸಿ ಮಹದೇವಮ್ಮ(36) ಮೃತಪಟ್ಟ ಮಹಿಳೆ. ಹಲವು ದಿನಗಳಿಂದ ತಲೆನೋವಿನಿಂದ ತೊಂದರೆ ಅನುಭವಿಸುತ್ತಿದ್ದ ಮಹದೇವಮ್ಮ ಸಾಕಷ್ಟು ಚಿಕಿತ್ಸೆ ಪಡೆದುಕೊಂಡಿದ್ದರೂ ವಾಸಿಯಾಗಿರಲಿಲ್ಲ.

ಇದರಿಂದ ಬೇಸತ್ತ ಅವರು ಶುಕ್ರವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೈಕ್ ನಲ್ಲಿದ್ದ ಪೆಟ್ರೋಲ್ ತೆಗೆದುಕೊಂಡು ಮೈ ಮೇಲೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ತೀವ್ರ ಸುಟ್ಟ ಗಾಯಗಳಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...