ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿಯ ಮನೆ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ.
ಆಫ್ರಿಕಾ ಮೂಲದ ಮೈಕೆಲ್ ಓಕಲಿ ಹಾಗೂ ಪತಿ ಸಹನಾ ಬಂಧಿತ ಆರೋಪಿಗಳು. ಬಂಧಿತರಿಂದ 1 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈನಲ್ಲಿ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆತನ ವಿಚಾರಣೆ ವೇಳೆ ಯರಪ್ಪನಹಳ್ಳಿಯಲ್ಲಿ ವಾಸವಾಗಿರುವ ದಂಪತಿ ಬಗ್ಗೆ ಬಾಯ್ಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಯರಪ್ಪನಹಳ್ಳಿ ಮನೆ ಮೇಲೆ ದಾಳಿ ನಡೆಸಿದ್ದರು. ಬಂಧಿತರಿಂದ 1 ಕೆಜಿಗೂ ಅಧಿಕ ಎಂಡಿಎಂಎ, ಮೂರು ಮೊಬೈಲ್ ಫೋನ್, ಎರಡು ಎಲೆಕ್ಟ್ರಾನಿಕ್ ತೂಕದ ಯಂತ್ರ ವಶಕ್ಕೆ ಪಡೆಯಲಾಗಿದೆ.