ಬೆಂಗಳೂರು: ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು ಬಾಲಕ ನಿರಂಜನ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಆರೊಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಮೃತ ಬಾಲಕನ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ರಾಜ್ಯ ಸರ್ಕಾರ, ಬಿಬಿಎಂಪಿ, ಕಾಂಗ್ರೆಸ್ ವತಿಯಿಂದ ಪರಿಹಾರ ನೀಡಲಾಗುವುದು ಎಂದರು.
ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯಿಂದ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಕಮಿಟಿಯಿಂದ 5 ಲಕ್ಷ ರೂಪಾಯಿ ಪರಿಹಾರ. ಒಟ್ಟು 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.