alex Certify BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾಗೌಡ, ಹಾಗೂ ಎ-2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27 ಕ್ಕೆ ಮುಂದೂಡಿಕೆಯಾಗಿದ್ದು, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಸೆ.25 ಕ್ಕೆ ನಿಗದಿಯಾಗಿದೆ.ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಈ ಆದೇಶ ಹೊರಡಿಸಿದೆ.

ಇನ್ನೂ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಗರದ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಜಾಮೀನು ಕೋರಿ ಸೆಪ್ಟೆಂಬರ್ 21ರಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 21ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 23ಕ್ಕೆ ಮುಂದೂಡಿತ್ತು. ಇಂದು ದರ್ಶನ್ ಅರ್ಜಿ ವಿಚಾರಣೆಗೆ ಬರಲಿದ್ದು, ಕಾಮಾಕ್ಷಿಪಾಳ್ಯ ಠಾಣೆ ತಾನಿಕಾಧಿಕಾರಿಗಳು ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ. ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು 3991 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Zde naleznete spoustu užitečných tipů a triků pro zlepšení vašeho každodenního života. Od kuchařských rad a receptů až po účinné způsoby péče o zahrádku, u nás najdete vše, co potřebujete k tomu, abyste žili šťastný a plnohodnotný život. Přečtěte si naše nejnovější články a dejte svému každodennímu životu nový impuls! Štěstí opustí šesti znamení zvěrokruhu: Rychlá 8 kreativních způsobů, jak využít Tipy a triky, které vám usnadní každodenní život! Objavte najlepšie recepty, ktoré vám pomôžu zvládnuť každodenné varenie a záhradnícke rady, ktoré vám pomôžu pestovať skvelé plodiny.