HomeCrimeಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಪ್ರೀತಿಸಿದ ಹುಡುಗಿ ಸೇರಿ 6 ಮಂದಿ ಅರೆಸ್ಟ್

ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಪ್ರೀತಿಸಿದ ಹುಡುಗಿ ಸೇರಿ 6 ಮಂದಿ ಅರೆಸ್ಟ್

ಕಲಬುರಗಿ: ಮದುವೆ ಮಾತುಕತೆ ವಿಚಾರ ವಿಕೋಪಕ್ಕೆ ತಿರುಗಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿಯಲ್ಲಿ ನಡೆದಿದ್ದು, ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸುಮಿತ್ ಕೊಲೆಯಾದ ಯುವಕ. ಸುಮಿತ್ ಸಹೋದರ ಸಚಿನ್ ಮತ್ತು ಉಷಾ ಪ್ರೀತಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣ ಕುಮಾರ ಹಾಗೂ ಇತರರು ಸಚಿನ್ ಮನೆಗೆ ಮದುವೆ ಮಾತುಕತೆಗೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಸಚಿನ್ ಇರಲಿಲ್ಲ. ಸುಮಿತ್ ಮತ್ತು ಪೋಷಕರು ಮನೆಯಲ್ಲಿದ್ದರು. ಮಾತಿಗೆ ಮಾತು ಬೆಳೆದು ಜಗಳವಾಗಿದೆ.

ಸುಮಿತ್ ಗೆ ಚಾಕುವಿನಿಂದ ಇರಿದಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಸುಮಿತ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರೀತಿಸಿದ ಯುವತಿ ಉಷಾ, ಆಕೆಯ ಸಹೋದರ ವರುಣಕುಮಾರ, ತಂದೆ ರಾಜಕುಮಾರ, ತಾಯಿ ಜಯಮ್ಮ, ವರುಣ ಕುಮಾರನ ಸ್ನೇಹಿತರಾದ ಸಿದ್ದು, ಪ್ರಜ್ವಲ್ ಅವರನ್ನು ಬಂಧಿಸಿದ್ದಾರೆ. ಮತ್ತಿಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್. ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular