alex Certify ಖಾಸಗಿ ಕಂಪನಿಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಕಂಪನಿಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಸೆ.26ರಂದು ಬೆಳಿಗ್ಗೆ 10.30 ರಿಂದ 3 ಗಂಟೆಯವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ 3ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿವೆ.

ಅಭ್ಯರ್ಥಿಗಳು 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ರಸ್ತೆ, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...