HomeKarnatakaಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿ: ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ಪ್ರಕಟ

ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿ: ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ನಡೆಸಲಾದ ನಿರ್ವಾಹಕರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂತಿಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ.

ಸೆ. 1 ರಂದು ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಪರೀಕ್ಷೆ ನಡೆಸಲಾಗಿದ್ದು, ಸೆ. 2 ರಂದು ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಸೆ. 5 ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಸ್ವೀಕೃತ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿ ಮೂಲಕ ಪರಿಶೀಲಿಸಿ ಅವರ ಶಿಫಾರಸ್ಸಿನಂತೆ ಪರಿಷ್ಕೃತ ಕೀ ಉತ್ತರಗಳನ್ನು ಸೆ. 11ರಂದು ಪ್ರಕಟಿಸಲಾಗಿತ್ತು.

ತಾತ್ಕಾಲಿಕ ಅಂಕಗಳಿಗೆ ಆಕ್ಷೇಪಣೆ ಸಲ್ಲಿಸಲು ಸೆ. 18ರವರೆಗೆ ಅವಕಾಶ ನೀಡಲಾಗಿತ್ತು. ಆಕ್ಷೇಪಣೆಗಳ ಪರಿಶೀಲನೆ ಬಳಿಕ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular