HomeKarnatakaBIG UPDATE : ಬೆಂಗಳೂರಿನಲ್ಲಿ 'ಮಹಾಲಕ್ಷ್ಮಿ' ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ : ಫ್ರಿಡ್ಜ್...

BIG UPDATE : ಬೆಂಗಳೂರಿನಲ್ಲಿ ‘ಮಹಾಲಕ್ಷ್ಮಿ’ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ : ಫ್ರಿಡ್ಜ್ ಮೇಲೆ ಹಲವು ಕಡೆ ಹಲವು ಬೆರಳಚ್ಚುಗಳು ಪತ್ತೆ..!

ಬೆಂಗಳೂರು : ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಫ್ರಿಡ್ಜ್ ಮೇಲೆ ಹಲವು ಕಡೆ ಹಲವು ಬೆರಳಚ್ಚುಗಳು ಪತ್ತೆಯಾಗಿದೆ. ಈ ಮೂಲಕ ಪ್ರಕರಣದಲ್ಲಿ ಓರ್ವ ಹಂತಹ ಭಾಗಿಯಾಗಿದ್ನಾ..? ಅಥವಾ ಇಬ್ಬರು ಅಥವಾ ಮೂವರು ಭಾಗಿಯಾಗಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

26 ವರ್ಷದ ಯುವತಿಯ ಶವವನ್ನು 30 ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ರೆಫ್ರಿಜರೇಟರ್ನಲ್ಲಿ ತುಂಬಿದ ಸ್ಥಿತಿಯಲ್ಲಿ ಪತ್ತೆಯಾದ ಆಘಾತಕಾರಿ ಬೆಳವಣಿಗೆಯಲ್ಲಿ, ಸಂತ್ರಸ್ತೆಯ ಪತಿ ತನ್ನ ಪತ್ನಿ ಮಹಾಲಕ್ಷ್ಮಿ ಅಶ್ರಫ್ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಆರೋಪಿಸಿದ್ದಾರೆ.ವರದಿಯ ಪ್ರಕಾರ, ಮಹಾಲಕ್ಷ್ಮಿ ಅವರ ಪತಿ ಅಶ್ರಫ್ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದರು ಎಂದು ಹೇಳಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಹಂತಕನ ಪತ್ತೆಗೆ ತೀವ್ರ ಶೋಧ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಮಹಾಲಕ್ಷ್ಮಿ (26) ಎಂಬ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿ, ಆಕೆಯ ದೇಹವನ್ನು 30 ತುಂಡುಗಳಾಗಿ ಕತ್ತರಿಸಿ ರೆಫ್ರಿಜರೇಟರ್ ನಲ್ಲಿಟ್ಟಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಯಾಲಿಕಾವಲ್ನ ಪೈಪ್ಲೈನ್ ರಸ್ತೆಯ ಬಳಿಯ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ನೆರೆಹೊರೆಯವರಿಗೆ ಕೆಟ್ಟ ವಾಸನೆ ಬಂದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular