ಬೆಂಗಳೂರು : ಸಿದ್ದರಾಮಯ್ಯ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸಿ, ರಾಜ್ಯಪಾಲರ ಮೇಲಿನ ಆರೋಪವನ್ನು ಬದಿಗಿಟ್ಟು, ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದು ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಮೂಡಾ ಹಗರಣದಲ್ಲಿ ಸಿಎಂ @siddaramaiah ಅವರ ಪಾತ್ರ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸಿ, ರಾಜ್ಯಪಾಲರ ಮೇಲಿನ ಆರೋಪವನ್ನು ಬದಿಗಿಟ್ಟು, ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ.
– ಶ್ರೀ @BYVijayendra, ರಾಜ್ಯಾಧ್ಯಕ್ಷರು#ResignSiddaramaiah… pic.twitter.com/yVUsAEUiKm
— BJP Karnataka (@BJP4Karnataka) September 24, 2024
ದಲಿತರ ನಿವೇಶನವನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಜಾಗವನ್ನು ತಮ್ಮ ಕುಟುಂಬಸ್ಥರ ಹೆಸರಿಗೆ ಮಾಡಿಕೊಂಡಿದ್ದ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹೈಕೋರ್ಟ್ ಕ್ರಮವು ಸತ್ಯಕ್ಕೆ ಸಂದ ಜಯ. ಶೋಷಿತರಿಗೆ ಅನ್ಯಾಯವೆಸಗಿ ರಾಜಕೀಯ ಮಾಡುತ್ತಿರುವ ಭ್ರಷ್ಟ ಸಿಎಂ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಸಂಘಟಿತವಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ನಡೆಸಿದ ಮೈಸೂರು ಚಲೋ ಪಾದಯಾತ್ರೆಗೆ, ಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲಾ ಕಾರ್ಯಕರ್ತರ ಶ್ರಮಕ್ಕೆ ಮತ್ತು ನಿವೇಶನ ಕಳೆದುಕೊಂಡವರಿಗೆ ಇಂದು ಜಯ ಸಿಕ್ಕಿದೆ ಎಂದು ಬಿಜೆಪಿ ಹೇಳಿದೆ.

