alex Certify ಜನಪರ ಸರ್ಕಾರ ಅಸ್ಥಿರಗೊಳಿಸಲು ಮೋದಿ, ಅಮಿತ್ ಶಾ ಯತ್ನ, ರಾಜ್ಯಪಾಲರ ಕಚೇರಿ ದುರ್ಬಳಕೆ: ವೇಣುಗೋಪಾಲ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಪರ ಸರ್ಕಾರ ಅಸ್ಥಿರಗೊಳಿಸಲು ಮೋದಿ, ಅಮಿತ್ ಶಾ ಯತ್ನ, ರಾಜ್ಯಪಾಲರ ಕಚೇರಿ ದುರ್ಬಳಕೆ: ವೇಣುಗೋಪಾಲ್ ಆಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಆಡಳಿತವು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ.

ಕರ್ನಾಟಕ ರಾಜ್ಯಪಾಲರು ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಜನಪ್ರಿಯ ಮತ್ತು ಜನಪರ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರು ಪ್ರಯತ್ನಿಸಿದ್ದಾರೆ ಎಂದು ಟೀಕಿಸಿದ್ದಾರೆ.

ರಾಜ್ಯಪಾಲರು ಸಂವಿಧಾನ ಮತ್ತು ಅದರ ಸ್ಪೂರ್ತಿಗೆ ಬದ್ಧರಾಗಿರಬೇಕು. ದೆಹಲಿ ದರ್ಬಾರ್ ಗೆ ಕರ್ನಾಟಕವನ್ನು ಮಂಡಿಯೂರಿಸುವ ಯತ್ನ ನಡೆದಿದೆ. ಆದರೆ ನಮ್ಮದು ಬಲಿಷ್ಠ ಸರ್ಕಾರ. ಜನರ ಮಾತನ್ನಷ್ಟೇ ಕೇಳುತ್ತದೆ. ಕೇಂದ್ರದ ದುಷ್ಟ ಉದ್ದೇಶಗಳ ವಿರುದ್ಧ ನಮ್ಮ ಪಕ್ಷ ಹೋರಾಟ ನಡೆಸಲಿದೆ. ನಮ್ಮ ಪಕ್ಷ ಕಾನೂನಾತ್ಮಕವಾಗಿ, ರಾಜಕೀಯವಾಗಿ ಹೋರಾಟ ನಡೆಸಲಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...