HomeIndiaಆಟೋ ಮೇಲೆ ಟ್ರಕ್ ಹರಿದು ಘೋರ ದುರಂತ: 7 ಜನ ಸಾವು, ಮೂವರಿಗೆ ಗಾಯ

ಆಟೋ ಮೇಲೆ ಟ್ರಕ್ ಹರಿದು ಘೋರ ದುರಂತ: 7 ಜನ ಸಾವು, ಮೂವರಿಗೆ ಗಾಯ

 ಭೋಪಾಲ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಆಟೋ ಮೇಲೆ ಟ್ರಕ್ ಹತ್ತಿದ ನಂತರ ಸಂಭವಿಸಿದ ರಸ್ತೆ ಅಪಘಾತದಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.

ದೇಹತ್ ಪೊಲೀಸ್ ಠಾಣೆಯ ಸಮಣ್ಣ ಬಳಿ ಈ ಅಪಘಾತ ಸಂಭವಿಸಿದ್ದು, ಕುಟುಂಬವೊಂದು ಆಟೋದಲ್ಲಿ ಬಂದಕ್‌ಪುರಕ್ಕೆ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಲೋಡರ್ ಟ್ರಕ್ ಅವರಿಗೆ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮೂವರ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಬಲ್‌ಪುರಕ್ಕೆ ಕಳುಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯ ಸುದ್ದಿ ತಿಳಿದ ನಂತರ ದಮೋಹ್ ಸಂಸದ ರಾಹುಲ್ ಲೋಧಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಮತ್ತು ಆಡಳಿತದೊಂದಿಗೆ ಸಂಪರ್ಕದಲ್ಲಿರುವುದಾಗಿ ಭರವಸೆ ನೀಡಿದರು.

ದಾಮೋಹ್‌ನ ಪೊಲೀಸ್ ಅಧೀಕ್ಷಕ(ಎಸ್‌ಪಿ) ಶ್ರುತ್ ಕೀರ್ತಿ ಸೋಮವಂಶಿ ಅವರು ಅಪಘಾತವನ್ನು ಭಯಾನಕ ಎಂದು ವಿವರಿಸಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

10 ಜನರನ್ನು ಹೊತ್ತೊಯ್ಯುತ್ತಿದ್ದ ಆಟೋರಿಕ್ಷಾಕ್ಕೆ ಟ್ರಕ್ ಡಿಕ್ಕಿ ಹೊಡೆದು ದಮೋಹ್ ಜಿಲ್ಲೆಯ ಸಾಮನ್ನಾ ಎಂಬಲ್ಲಿ ಅಪಘಾತ ಸಂಭವಿಸಿದೆ. ಅವರಲ್ಲಿ 7 ಜನ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಬಲ್ಪುರ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ ಎಂದು ಸೋಮವಂಶಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಮೋಹನ್ ಯಾದವ್ ಪರಿಹಾರ ಘೋಷಣೆ

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂಪಾಯಿ, ಗಾಯಾಳುಗಳಿಗೆ 50 ಸಾವಿರ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ನಿರ್ಲಕ್ಷ್ಯ ತೋರಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular