ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಕೆಕೆ ಗೆಸ್ಟ್ ಹೌಸ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ತುಂಬಿಸಿ ಕರೆದೊಯ್ದಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು
ಮುಖ್ಯಮಂತ್ರಿಯ ವಿರುದ್ಧ ತನಿಖೆ ನಡೆಸಲು ನ್ಯಾಯಾಲಯ ಅನುಮತಿಸಿದರೂ ಸಿಎಂ ಆಗಿ ಮುಂದುವರೆಯುತ್ತಿರುವ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ಮಂಡ್ಯ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಭ್ರಷ್ಟಾಚಾರಿ ಮುಖ್ಯಮಂತ್ರಿಯ ವಿರುದ್ಧ ತನಿಖೆ ನಡೆಸಲು ನ್ಯಾಯಾಲಯ ಅನುಮತಿಸಿದರೂ ಸಿಎಂ ಆಗಿ ಮುಂದುವರೆಯುತ್ತಿರುವ @siddaramaiah ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ಮಂಡ್ಯ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.… pic.twitter.com/TqLt8KtNuT
— BJP Karnataka (@BJP4Karnataka) September 24, 2024

