alex Certify BREAKING : CM ಸಿದ್ದರಾಮಯ್ಯಗೆ ಮತ್ತೊಂದು ಬಿಗ್ ಶಾಕ್ : ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : CM ಸಿದ್ದರಾಮಯ್ಯಗೆ ಮತ್ತೊಂದು ಬಿಗ್ ಶಾಕ್ : ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹೊರಡಿಸಿದೆ.

ಡಿಸೆಂಬರ್ 24 ರೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರ್ಟ್ ಸೂಚನೆ ನೀಡಿದೆ.  ಮೈಸೂರು ಲೋಕಾಯುಕ್ತ ಎಸ್ ಪಿಗೆ  ಸೂಚನೆ ನೀಡಿ  ಕೋರ್ಟ್ ಆದೇಶ ಹೊರಡಿಸಿದೆ.

ವಾದ ವಿವಾದ ಆಲಿಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಈ ಆದೇಶ ಹೊರಡಿಸಿದ್ದಾರೆ. ಸಿದ್ದರಾಮಯ್ಯ ಡಿಸಿಎಂ ಆಗಿದ್ದಾಗ ನಡೆದ ಘಟನೆಗಳ ಬಗ್ಗೆ ಕೂಡ ಜಡ್ಜ್ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ತನಿಖೆಗೆ ಹಿಂಜರಿಯಬಾರದು ಎಂಬ ಹೈಕೋರ್ಟ್ ತೀರ್ಪನ್ನು ಜಡ್ಜ್ ಉಲ್ಲೇಖಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದ್ದಾರೆ. ಒಟ್ಟಿನಲ್ಲಿ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ತ ಶುರುವಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...