HomeKarnatakaBIG NEWS : ಹುತಾತ್ಮ ಪೊಲೀಸ್ ಸಿಬ್ಬಂದಿಯ 'ಗುಂಪು ವಿಮಾ ಮೊತ್ತ' 50 ಲಕ್ಷಕ್ಕೆ ಹೆಚ್ಚಳ...

BIG NEWS : ಹುತಾತ್ಮ ಪೊಲೀಸ್ ಸಿಬ್ಬಂದಿಯ ‘ಗುಂಪು ವಿಮಾ ಮೊತ್ತ’ 50 ಲಕ್ಷಕ್ಕೆ ಹೆಚ್ಚಳ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಳ ಮಾಡಿರುವ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯ ಫಾಲೋಯರ್ ಹುದ್ದೆಯಿಂದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಹುದ್ದೆಯವರೆಗೆ ಒಟ್ಟು ಸಂಖ್ಯಾ ಬಲ 93,449 ಅಧಿಕಾರಿ/ಸಿಬ್ಬಂದಿಗಳಿಗೆ ವಿಶೇಷ ಗುಂಪು ವಿಮಾ ಮೊತ್ತವನ್ನು ರೂ.20.00 ಲಕ್ಷಗಳಿಂದ ರೂ.50.00 ಲಕ್ಷಗಳಿಗೆ ಪ್ರಸಕ್ತ ಚಾಲ್ತಿಯಲ್ಲಿರುವ ವಿಮಾ ಅವಧಿ ಮುಕ್ತಾಯದ ನಂತರದ ದಿನಾಂಕದಿಂದ ಜಾರಿಗೆ ಬರುವಂತೆ ಹೆಚ್ಚಿಸಿ ಆದೇಶಿಸಿದೆ.
ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ/ಅಪಘಾತದಲ್ಲಿ ಮೃತಪಟ್ಟ ಕರ್ತವ್ಯನಿರತ ಪೊಲೀಸ್ ಇಲಾಖೆಯ ಉದ್ಯೋಗಿಗಳ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕ ಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular