BREAKING : ಗುರು ಮೂಕಪ್ಪ ಶಿವಯೋಗಿಗಳ ಮಠದ ಹಿರಿಯ ಶ್ರೀ ವಿರೂಪಾಕ್ಷ ಮಹಾಸ್ವಾಮಿ ಲಿಂಗೈಕ್ಯ

ಶಿವಮೊಗ್ಗ : ಶಿಕಾರಿಪುರದ ಸುರಗಿಹಳ್ಳಿ ಮಠ ಹಾಗೂ ರಟ್ಟಿಹಳ್ಳಿ ತಾಲ್ಲೂಕಿನ ಜಂಗಮಕ್ಷೇತ್ರ ಶ್ರೀ ಗುರು ಮೂಕಪ್ಪ ಶಿವಯೋಗಿಗಳ ಮಠದ ಹಿರಿಯ ಶ್ರೀಗಳಾದ ಶ್ರೀ ವಿರೂಪಾಕ್ಷ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ.

ಆಧ್ಯಾತ್ಮ ಮಾರ್ಗದರ್ಶಕರೂ, ತ್ರಿಕಾಲ ಪೂಜಾ ನಿಷ್ಠರೂ ಆಗಿ ಶ್ರೀಮಠವನ್ನು ಮುನ್ನಡೆಸುತ್ತಿದ್ದ ಶ್ರೀಗಳ ನಿಧನಕ್ಕೆ ಶ್ರೀಮಠದ ಭಕ್ತಾದಿಗಳು ಕಂಬನಿ ಮಿಡಿದಿದ್ದಾರೆ.

ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಶಿಕಾರಿಪುರದ ಸುರಗಿಹಳ್ಳಿ ಮಠ ಹಾಗೂ ರಟ್ಟಿಹಳ್ಳಿ ತಾಲ್ಲೂಕಿನ ಜಂಗಮಕ್ಷೇತ್ರ ಶ್ರೀ ಗುರು ಮೂಕಪ್ಪ ಶಿವಯೋಗಿಗಳ ಮಠದ ಹಿರಿಯ ಶ್ರೀಗಳಾದ ಪರಮಪೂಜ್ಯ ಶ್ರೀ ವಿರೂಪಾಕ್ಷ ಮಹಾಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ಅಪಾರ ದುಃಖವಾಯಿತು. ಆಧ್ಯಾತ್ಮ ಮಾರ್ಗದರ್ಶಕರೂ, ತ್ರಿಕಾಲ ಪೂಜಾ ನಿಷ್ಠರೂ ಆಗಿ ಶ್ರೀಮಠವನ್ನು ಮುನ್ನಡೆಸುತ್ತಿದ್ದ ಪೂಜ್ಯರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಶ್ರೀಮಠದ ಭಕ್ತಾದಿಗಳಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ.ಓಂಶಾಂತಿ ಎಂದು ಬರೆದುಕೊಂಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read