HomeIndiaBIG NEWS: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ

BIG NEWS: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ

ಚೆನ್ನೈ: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ.

ತಿರುಚ್ಚಿ-ಮದುರೈ ಹೆದ್ದಾರಿಯ ನವಸಮುತಿರಂ ಬಳಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಐವರು ಶವವಾಗಿ ಪತ್ತೆಯಾಗಿದ್ದಾರೆ. ವಾಚ್ ಮೆನ್ ಓರ್ವರು ನಿಂತಿದ್ದ ಕಾರನ್ನು ಪರಿಶೀಲಿಸಿದಾಗ ಐವರು ಸಾವನಪ್ಪಿರುವುದು ತಿಳಿದುಬಂದಿದೆ.

ಮೃತರನ್ನು ಸೇಲಂ ನ ಮಣಿಗಂದನ್, ಪತ್ನಿ ನಿತ್ಯಾ ಹಾಗೂ ಕುಟುಂಬ ಸದಸ್ಯರು ಎಂದು ಗುರುತಿಸಲಾಗಿದೆ. ಮಣಿಗಂಧನ್ ಸೇಲಂ ಹಾಗೂ ಕೃಷ್ಣಗಿರಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ತೀವ್ರ ನಷ್ಟದಲ್ಲಿದ್ದರು ಎಂದು ತಿಳಿದುಬಂದಿದೆ. ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular