ಮೈಸೂರು: ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿ, ತರಾಟೆಗೆ ತೆಗೆದುಕೊಂಡ ಘಟನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ಬಳಿ ನಡೆದಿದೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸುತ್ತಿದ್ದು, ಮೂರು ದಿನಗಳ ಕಾಲ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಕೆಲವೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಿಂದ ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ಆಗಮಿಸಲಿದ್ದು, ಸಿಎಂ ಸಿದ್ದರಾಮಯ್ಯ ಸ್ವಾಗತಿಸಲು ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ. ಏರ್ ಪೋರ್ಟ್ ಬಳಿ ‘ನಾವು ಸಿದ್ದರಾಮಯ್ಯ ಪರ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಗಳನ್ನು ಹಿಡಿದು ಅಭಿಯಾನ ನಡೆಸುತ್ತಿದ್ದಾರೆ. ಇದೇ ವೇಳೆ ಏರ್ ಪೋರ್ಟ್ ಬಳಿ ಆಗಮಿಸಿದ ಮುಡಾ ಅಧ್ಯಕ್ಷ ಮರಿಗೌಡ ಅವರಿಗೆ ಮುತ್ತಿಗೆ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು, ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಸಿದ್ದರಾಮಯ್ಯ ಅವರ ಇಂದಿನ ಸ್ಥಿತಿಗೆ ನೀನೇ ಕಾರಣ. ಆಪ್ತನಾಗಿದ್ದುಕೊಂಡು ಮೋಸ ಮಾಡಿದ್ದೀಯಾ ಎಂದು ಕಿಡಿಕಾರಿದರು. ಕಾಂಗ್ರೆಸ್ ಕಾರ್ಯಕರ್ತರು ಮುಡಾ ಅಧ್ಯಕ್ಷ ಮರಿಗೌಡಗೆ ಮುತ್ತಿಗೆ ಹಾಕುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.
ಪ್ರತಿಭಟನೆ ಹೆಚ್ಚುತ್ತಿದ್ದಂತೆ ಮರಿಗೌಡ ಏರ್ ಪೋರ್ಟ್ ನಿಂದ;ಏ ವಾಪಾಸ್ ತೆರಳಿದ ಘಟನೆ ನಡೆದಿದೆ.