HomeKarnatakaBREAKING NEWS: ಸಿಎಂ ಸಿದ್ದರಾಮಯ್ಯಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

BREAKING NEWS: ಸಿಎಂ ಸಿದ್ದರಾಮಯ್ಯಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.

ಮೈಸೂರು ಬಿಜೆಪಿ ಕಚೇರಿ ಬಳಿ ಸೇರಿರುವ ಸಾವಿರಾರು ಬಿಜೆಪಿ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ವೇಳೆ ಪೊಲೀಸರು ಬಿಜೆಪಿ ಕಚೇರಿ ಬಳಿ ಹಾಕಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ, ಅದರ ಮೇಲೆ ಹತ್ತಿ ಹೊರ ಹೋಗಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆಯೊಡ್ಡಿದ್ದಾರೆ.

ಮೈಸೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕೆಡಿಪಿ ಸಭೆ ನಡೆಯಲಿದ್ದು, ಸಭೆ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಮುತ್ತಿಗೆ ಹಾಕುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯತ್ತ ಮುನ್ನುಗ್ಗಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯುತ್ತಿದ್ದಂತೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular