HomeKarnatakaBIG NEWS : ರಾಜೀನಾಮೆ ಕೊಡ್ತಾರಾ CM ಸಿದ್ದರಾಮಯ್ಯ? ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

BIG NEWS : ರಾಜೀನಾಮೆ ಕೊಡ್ತಾರಾ CM ಸಿದ್ದರಾಮಯ್ಯ? ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಗೆ ಆದೇಶ ಹೊರಡಿಸಿದೆ. ಅಂತೆಯೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಬಿಗಿ ಪಟ್ಟು ಹಿಡಿದಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಕೋಡಿಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಧಾರವಾಡ ಸುದ್ದಿಗಾರರ ಜೊತೆ ಮಾತನಾಡಿದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಅಭಿಮನ್ಯುವಿನ ಬಿಲ್ಲಿನ ದಾರವನ್ನು ಮೋಸದಿಂದ ಕರ್ಣನ ಕೈಯಿಂದ ದಾರ ಕಟ್ ಮಾಡಿಸುತ್ತಾರೆ ಅಂತಾ ಹೇಳಿದ್ದೆ. ಮಹಾಭಾರತದಲ್ಲಿ ಕೃಷ್ಣನಿದ್ದ, ಭೀಮ ಗೆದ್ದ. ಇಲ್ಲಿ ಕೃಷ್ಣ ಇಲ್ಲ ದುರ್ಯೋಧನ ಗೆದ್ದ. ಅಭಿಮನ್ಯವಿನ ಹೆಂಡತಿ ರಣರಂಗ ಪ್ರವೇಶಿಸುತ್ತಾಳೆ ಎಂದಿದ್ದೆ ಈಗ ಏನಾಯ್ತು? ಬಿಲ್ಲಿನ ದಾರ ಕಟ್ ಮಾಡಿಸಿದರು. ಸಿದ್ದರಾಮಯ್ಯ ಅವರ ಪತ್ನಿ ಒಮ್ಮೆಯೋ ಸಾರ್ವಜನಿಕವಾಗಿ ಹೊರಗೆ ಬಂದಿಲ್ಲ. ಪಾವಿತ್ರ್ಯತೆ ಇರುವ ಹೆಣ್ಣು ಮಗಳ ಬಗ್ಗೆ ಎಲ್ಲಾ ಕಡೆ ಮಾತನಾಡಿಕೊಳ್ಳುವಂತೆ ಮಾಡಿದ್ದಾರೆ ಎಂದರು.

ತಿರುಪತಿಯಲ್ಲಿ ವೆಂಕಟೇಶ್ವರನ ಸನ್ನಿದಿಯಲ್ಲಿ ಏನಾಯ್ತು ..? ಕೃಷ್ಣ ಇಲ್ಲದಕ್ಕೆ ದುರ್ಯೋಧನ ಗೆದ್ದ. ನೀವು ಧರ್ಮಶಾಸ್ತ್ರದ ಪ್ರಕಾರ ಸ್ಥಳ ಸ್ವಚ್ಛ ಮಾಡಿದ್ದೀರಿ, ಆದರೆ ನಾಲ್ಕು ವರ್ಷ ಅದನ್ನು ತಿಂದವರನ್ನು ಏನು ಮಾಡ್ತೀರಿ, ಇದಕ್ಕೆ ಸರ್ಕಾರವೇ ಉತ್ತರ ಕೊಡಬೇಕಿದೆ ಎಂದು ಶ್ರೀಗಳು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular