ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ಗೆ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ.
ಈ ಹಿನ್ನೆಲೆ ದರ್ಶನ್ ಪರ ವಕೀಲ ಸುನೀಲ್ ವಾದಮಂಡನೆಗೆ ಕಾಲಾವಕಾಶ ಕೇಳಿದ್ದು, ಕೋರ್ಟ್ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.30 ಕ್ಕೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ಈ ಆದೇಶ ಹೊರಡಿಸಿದೆ.
ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ನಿರಾಸೆಯಾಗಿದ್ದು, ಕೋರ್ಟ್ ಸೆ.30 ಕ್ಕೆ ವಿಚಾರಣೆ ಮುಂದೂಡಿದೆ.