alex Certify BIG NEWS: ಸಿಬಿಐ ಮುಕ್ತ ತನಿಖೆ ಅಧಿಕಾರ ವಾಪಾಸ್ ನಿರ್ಧಾರದ ಕಾರಣ ತಿಳಿಸಿದ ಡಿಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಬಿಐ ಮುಕ್ತ ತನಿಖೆ ಅಧಿಕಾರ ವಾಪಾಸ್ ನಿರ್ಧಾರದ ಕಾರಣ ತಿಳಿಸಿದ ಡಿಸಿಎಂ

ಬೆಂಗಳೂರು: ದ್ವೇಷದ ರಾಜಕಾರಣಕ್ಕೆ ದಾರಿ ಆಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಅಧಿಕಾರವನ್ನು ಹಿಂಪಡೆಯಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಿಬಿಐ ಮುಕ್ತ ತನಿಖೆಗೆ ರಾಜ್ಯ ಸರ್ಕಾರ ಕಡಿವಾಣ ಹಾಕಿರುವ ಬಗ್ಗೆ ಬಿಜೆಪಿ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಗಂಭೀರ ಪ್ರಕರಣಗಳು ಎದುರಾದಾಗ ನಮ್ಮ ಅಧಿಕಾರಿಗಳು ತನಿಖೆಗೆ ಸೂಕ್ತರಲ್ಲ ಎನ್ನುವ ಅಭಿಪ್ರಾಯ ಬಂದರೆ, ಆ ವೇಳೆ ಸಿಬಿಐಗೆ ನೀಡುವ ಬಗ್ಗೆ ಚಿಂತನೆ ಮಾಡುತ್ತೇವೆ ಎಂದರು.

ಸಿಬಿಐ ಬಗ್ಗೆ ಜನತಾದಳದ ದೇವೇಗೌಡರು, ಕುಮಾರಸ್ವಾಮಿ ಏನು ಮಾತನಾಡಿದ್ದರು ಎಂಬುದು ಎಲ್ಲರಿಗೂ ತಿಳಿದಿದೆ. ಬಿಜೆಪಿಯವರು ಸಿಬಿಐ ಅನ್ನು ಕಾಂಗ್ರೆಸ್ ಬ್ಯೂರೋ ಆಫ್ ಏಜೆನ್ಸಿ ಎಂದು ಕರೆದಿದ್ದರು. ಸಿಬಿಐಗೆ ಯಾವ, ಯಾವ ಪ್ರಕರಣಗಳನ್ನು ನೀಡಲಾಗಿತ್ತು. ಅವುಗಳು ಏನಾಗಿವೆ, ಐಎಂಎ ಪ್ರಕರಣ ಏನಾಗಿದೆ ಎಂಬುದರ ಬಗ್ಗೆ ನಾನು ಚರ್ಚಿಸುವುದಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ರಕ್ಷಣೆಗೆ ಹಾಗೂ ಸಿಬಿಐ ತನಿಖೆ ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನುವ ಆರೋಪ ಮಾಡಲಾಗುತ್ತಿದೆ. ವಿರೋಧ ಪಕ್ಷದವರು ಮಾತನಾಡಿಕೊಳ್ಳಲಿ, ಇದರ ಬಗ್ಗೆ ಬೇರೆ ಸಮಯದಲ್ಲಿ ಮಾತನಾಡೋಣ ಎಂದರು.

ಇನ್ನು ಅನೇಕ ವಿಚಾರಗಳನ್ನು ಮುಖ್ಯಮಂತ್ರಿಗಳು ಹಾಗೂ ಕ್ಯಾಬಿನೆಟ್ ಗಮನಕ್ಕೆ ತರದೇ ತೀರ್ಮಾನ ಮಾಡಲು ಆಗಲ್ಲ. ಆದ ಕಾರಣ ರಾಜ್ಯಪಾಲರ ಪತ್ರಕ್ಕೆ ಸಂಪುಟದಲ್ಲಿ ಒಪ್ಪಿಗೆ ಪಡೆದು ಉತ್ತರ ನೀಡಬೇಕು ಎನ್ನುವ ತೀರ್ಮಾನ ತಗೆದುಕೊಂಡಿದ್ದೇವೆ.

ನನಗೂ ನೀತಿ, ನಿಯಮಗಳ ಬಗ್ಗೆ ಸ್ವಲ್ಪ ತಿಳುವಳಿಕೆಯಿದೆ. ನಾನು ವಿದ್ಯಾವಂತ, ಬುದ್ದಿವಂತ ಅಲ್ಲದಿದ್ದರೂ ಪ್ರಜ್ಞಾವಂತಿಕೆ ಹೊಂದಿದ್ದೇನೆ. ಪ್ರತಿಯೊಂದಕ್ಕೂ ನಿಯಮವಿರುತ್ತದೆ. ರಾಜ್ಯಪಾಲರ ಕಚೇರಿಗೆ ಮುಖ್ಯ ಕಾರ್ಯದರ್ಶಿಗಳ ಮೂಲಕ ಉತ್ತರ ಹೋಗಬೇಕು. ನನ್ನ ಕಚೇರಿಗೆ ಕೆಲವು ದಿನಗಳ ಹಿಂದೆ ಡಿನೋಟಿಫಿಕೇಷನ್ ಅಥವಾ ರೀಡೂ ಸಂಬಂಧಪಟ್ಟ ಕಡತ ಬಂದಿತ್ತು. ನನ್ನ ಕಾರ್ಯದರ್ಶಿ ನನಗೆ ಕಳುಹಿಸಿದ್ದರು. ಇದಕ್ಕೆ ನಾನು, ಬೇರೆಯವರಿಗೆ ಉತ್ತರ ಕೊಡಲು ಆಗುವುದಿಲ್ಲ. ಕ್ಯಾಬಿನೆಟ್ ನಲ್ಲಿ ಈ ಹಿಂದೆ ತೀರ್ಮಾನವಾದಂತೆ, ಈ ಕುರಿತು ಸಂಪುಟ ಉಪ ಸಮಿತಿ ರಚನೆಯಾಗಿದೆ, ಅಲ್ಲಿಗೆ ಕಳುಹಿಸಿ ಎಂದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...