HomeKarnatakaಗುಡ್ ನ್ಯೂಸ್: ಲೆಕ್ಕಪರಿಶೋಧನಾ ಇಲಾಖೆ 399 ಹುದ್ದೆ ಭರ್ತಿಗೆ KPSC ಪ್ರಸ್ತಾವನೆ

ಗುಡ್ ನ್ಯೂಸ್: ಲೆಕ್ಕಪರಿಶೋಧನಾ ಇಲಾಖೆ 399 ಹುದ್ದೆ ಭರ್ತಿಗೆ KPSC ಪ್ರಸ್ತಾವನೆ

ಬೆಂಗಳೂರು: ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ 399 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡುವಂತೆ ಕೋರಿ ಆರ್ಥಿಕ ಇಲಾಖೆಗೆ ಕರ್ನಾಟಕ ಲೋಕಸೇವಾ ಆಯೋಗವು(KPSC) ಪ್ರಸ್ತಾವನೆ ಸಲ್ಲಿಸಿದೆ.

ಇಲಾಖೆಯಲ್ಲಿರುವ ಸಹಕಾರ ಸಂಘಗಳ ನಿಬಂಧಕರ ಕಚೇರಿಯಲ್ಲಿರುವ ನಿರೀಕ್ಷಕರು ಮತ್ತು ಲೆಕ್ಕ ಸಹಾಯಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಅನುಮತಿ ಕೋರಲಾಗಿದೆ.

ಅನುಮೋದನೆ 2024ರ ಮಾರ್ಚ್ 31ರ ವೇಳೆಗೆ ಇಲಾಖೆಯಲ್ಲಿನ ನಿವೃತ್ತಿ, ನಿಧನ, ಸ್ವಯಂನಿವೃತ್ತಿ ಸೇರಿ ವಿವಿಧ ವೃಂದಗಳ 976 ಹುದ್ದೆಗಳು ಖಾಲಿ ಇವೆ. ಒಟ್ಟಾರೆ ಇಲಾಖೆಯಲ್ಲಿನ ಶೇ.97 ಹುದ್ದೆಗಳ ಖಾಲಿ ಇವೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಲಾಖೆಯ ಕರ್ತವ್ಯ ಮತ್ತು ಹೊಣೆಗಾರಿಕೆ ನಿರ್ವಹಿಸಲು ಮೂಲ ವೃಂದದಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕ ಹುದ್ದೆಯನ್ನು ನೇರ ನೇಮಕಾತಿ ಮತ್ತು ಪದೋನ್ನತಿಯಿಂದ ನೇಮಕ ಮಾಡಬೇಕಿದೆ. ಪ್ರಸ್ತುತ 9 ಸಹಾಯಕ ನಿರ್ದೇಶಕರ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಕೆಪಿಎಸ್ಸಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular