HomeEntertainment'ಕಾಡದೆಯೇ ಹೇಗಿರಲಿ' ವಿಡಿಯೋ ಹಾಡು ರಿಲೀಸ್

‘ಕಾಡದೆಯೇ ಹೇಗಿರಲಿ’ ವಿಡಿಯೋ ಹಾಡು ರಿಲೀಸ್

‘ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಈಗಾಗಲೇ 50 ದಿನಗಳನ್ನು ಪೂರೈಸಿದ್ದು, ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದೆ. ಈ ಚಿತ್ರದ ‘ಕಾಡದೆಯೇ ಹೇಗಿರಲಿ’ ವಿಡಿಯೋ ಹಾಡು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಪೃಥ್ವಿ ಭಟ್ ಈ ಹಾಡಿಗೆ ಧ್ವನಿಯಾಗಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಜಯಂತ್ ಕಾಯ್ಕಿಣಿ ಅವರ ಸಾಹಿತ್ಯವಿದೆ.

ಶ್ರೀನಿವಾಸ ರಾಜು ನಿರ್ದೇಶನದ ಫ್ಯಾಮಿಲಿ ಎಂಟರ್ಟೈನರ್ ಕಥಾಹಂದರ ಹೊಂದಿರುವ ಈ  ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ಶರಣ್ಯ ಶೆಟ್ಟಿ ಹಾಗೂ ಮಾಳ್ವಿಕಾ ನಾಯರ್ ಪ್ರಮುಖ ಪಾತ್ರದಲ್ಲಿದ್ದಾರೆ. ಕೆಎಂ ಪ್ರಕಾಶ್ ಸಂಕಲನ, ವಿಜಯ್ ಈಶ್ವರ್ ಸಂಭಾಷಣೆ, ಹಾಗೂ ವೆಂಕಟ್ ರಾಮ್ ಪ್ರಸಾದ್ ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular